ಉಪಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ-ಮಾಜಿ ಪಿ.ಎಂ.ದೇವೇಗೌಡ

ಬೆಂಗಳೂರು, ಏ.24-ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರೇ ಇದ್ದರು. ಹೀಗಾಗಿ ಆ ಕ್ಷೇತ್ರಗಳಿಗೆ ಜೆಡಿಎಸ್ ಸ್ಪರ್ಧೆ ಮಾಡುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಅವರಿಗೆ ಜೆಡಿಎಸ್ ಬೆಂಬಲ ನೀಡಲಿದೆ. ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಮನ ಹರಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ಇದರ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ