ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗಯಲ್ಲ-ನಿಖಿಲ್ ಕುಮಾರಸ್ವಾಮಿ

ಮಂಡ್ಯ, ಏ.25- ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಕಟ್ಟುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲಿತಾಂಶ ಕುರಿತು ಯಾರೂ ಸಹ ಬೆಟ್ಟಿಂಗ್ ಕಟ್ಟಬಾರದು ಎಂದು ಮನವಿ ಮಾಡಿದರು.

ಇದುವರೆಗೂ ನಮ್ಮ ಕುಟುಂಬದವರ್ಯಾರು ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಹೇಳಿದ ಅವರು ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಬೆಂಬಲಿಗರನ್ನು ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಬೇರೆಯವರ ಯಾವುದೇ ಮಾತಿಗೂ ನಾನು ಪ್ರತಿಕ್ರಿಯೆಸುವುದಿಲ್ಲ ಎಂದು ತಿಳಿಸಿದರು.

ಈ ಚುನಾವಣೆ ನನಗೆ ಅದ್ಭುತವಾದ ಅನುಭವ ನೀಡಿದೆ. ಈ ಒಂದು ತಿಂಗಳಲ್ಲಿ ಮಂಡ್ಯ ಕ್ಷೇತ್ರದ ಎಲ್ಲ ಹಳ್ಳಿಗಳನ್ನು ಸುತ್ತಾಡಿ ಜನರಿಂದ ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದೇನೆ ಅವರ ಕಷ್ಟ-ಸುಖ ಆಲಿಸಿದ್ದೇನೆ ಎಂದು ಹೇಳಿದರು.

ನಾನು ನಾಮಪತ್ರ ಸಲ್ಲಿಸಿದ ಜನ ಲಕ್ಷಕ್ಕಿಂತ ಅಧಿಕ ಜನರಿದ್ದು ನನ್ನನ್ನು ಬೆಂಬಲಿಸಿದರು. ಆದರೆ ಅವರಿಗೆಲ್ಲ ಹಣ ಕೊಟ್ಟು ಕರೆಸಿದ್ದರೆಂದು ಏನೇನೂ ಹೇಳುತ್ತಾರೆ ಇದೆಲ್ಲ ಸುಳ್ಳು ನಮ್ಮ ಪಕ್ಷದ ಮೇಲೆ ಅಭಿಮಾನ ಇಟ್ಟ ಜನರು ತಾವಾಗಿಯೇ ಬಂದಿದ್ದರು ಎಂದು ಸ್ಪಷ್ಟಪಡಿಸಿದರು.

ನಿಮ್ಮನ್ನು ಬೆಂಬಲಿಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರಂತಲ್ಲಾ ಎಂಬ ವರದಿಗಾರರ ಪ್ರಶ್ನೆಗೆ ಈ ಬಗ್ಗೆ ನನಗೇನು ತಿಳಿಯದು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಹೇಳಿದರು.

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಬೆಂಬಲದಿಂದ ಚುನಾವಣೆ ಎದುರಿಸಿದ್ದೇನೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ನಿಖಿಲ್ ಕುಮಾರ್‍ಸ್ವಾಮಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ