ಬೆಂಗಳೂರು, ಏ.25-ಲಂಡನ್ನ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನವು ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏ.27ರಂದು ಸಂಜೆ 6 ಗಂಟೆಗೆ ಜಯನಗರ 8ನೆ ಬ್ಲಾಕ್ನಲ್ಲಿನ ಶ್ರೀ ಶಿವರಾತ್ರೀಶ್ವರ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.
ಚಿತ್ರದುರ್ಗ ಮುರುಘ ರಾಜೇಂದ್ರ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ನೇತೃತ್ವ ವಹಿಸಲಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದು, ವೈಚಾರಿಕ ಚಿಂತಕರಾದ ಡಾ.ಎಂ.ಎಸ್.ಆಶಾದೇವಿ ಅವರಿಗೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಕೆ.ಮರುಳಸಿದ್ದಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.