ವಾರಣಾಸಿ: ಉತ್ತರಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಮತ್ತೊಮ್ಮೆ ಆಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಥನ ಸನ್ನಿಧಾನದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ.
ಪ್ರಧಾನಿ ಮೋದಿ ವಾರಣಾಸಿಯಿಂದ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಈ ನಿಟ್ಟಿನಲ್ಲಿ ಇಂದು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದ್ದಾರೆ. ಪಂಡಿತ್ ಮದನ್ ಮೋಹನ್ ಮಾಳವೀಯಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ರೋಡ್ ಶೋ ಆರಂಭಿಸಿದ ಮೋದಿ, 6 ಕಿ.ಮೀ ವರೆಗೆ ಸಾಗಿದ್ದಾರೆ. ಮೋದಿಗಾಗಿ ವಾರಣಾಸಿಯಲ್ಲಿ 101 ಸ್ವಾಗತ ಕೇಂದ್ರ ಸ್ಥಾಪಿಸಲಾಗಿದ್ದು, ಇಡೀ ವಾರಣಾಸಿ ಕ್ಷೇತ್ರ ಕೇಸರಿಮಯವಾಗಿ ಮಾರ್ಪಟ್ಟಿದೆ.
ರೋಡ್ ಶೋ ನಡೆಯುತ್ತಿರುವ ರಸ್ತೆಯುದ್ದಕ್ಕೂ ಲಕ್ಷಾಂತರ ಅಭಿಮಾನಿಗಳು ನೆರೆದಿದ್ದು, ಮೋದಿ, ಮೋದಿ ಎಂಬ ಘೋಷಣೆಗಳೊಂದಿಗೆ ಪ್ರಧಾನಿಯನ್ನು ಬರಮಾಡಿಕೊಳ್ಳುತ್ತಿದ್ದಾರೆ. ತೆರೆದ ವಾಹನದಲ್ಲಿ 6.ಕೀ.ಮೀ ವರೆಗೆ ಮೆರವಣಿಗೆ ಸಾಗಿರುವ ಮೋದಿ ನೆರೆದ ಜನರತ್ತ ಕೈಬೀಸಿ ಸಾಗಿದ್ದಾರೆ.
ರೋಡ್ ಶೋ ಬಳಿಕ ಪ್ರಧಾನಿ ಮೋದಿ ಸಂಜೆ ಅಶ್ವಮೇದ್ ಘಾಟ್ ನಲ್ಲಿ ಗಾಂಗಾರತಿ ನೆರವೇರಿಸಲಿದ್ದಾರೆ.