ಕೊಲಂಬೋ: ಶ್ರೀಲಂಕಾದ ಕೊಲಂಬೊದಲ್ಲಿ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ಈಸ್ಟರ್ ದಿನ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 359 ಮಂದಿ ಸಾವನ್ನಪ್ಪಿದ ಕರಾಲ ಘಟನೆ ಬೆನ್ನಲ್ಲೇ ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ಸ್ಫೋಟದ ಬಗ್ಗೆ ವರಧಿಯಾಗಿದೆ.
ಕೊಲಂಬೋದಿಂದ 40 ಕಿಮೀ ದೂರದಲ್ಲಿರುವ ಪುಗೋಡಾ ಎಂಬ ನಗರದಲ್ಲಿ ಸ್ಫೋಟದ ಸದ್ದು ಕೇಳಿದ್ದು, ಉಗ್ರರದಾಳಿ ಇರಬಹುದು ಎಂದು ಶಂಕಿಸಲಾಗಿದೆ.
ಕಸದ ತೊಟ್ಟಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಖಾಲಿ ಜಾಗವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಏಪ್ರಿಲ್ 21 ರಂದು ಶ್ರೀಲಂಕಾದಲ್ಲಿ ಎಂಟು ಕಡೆ ನಡೆದ ಸರಣಿ ಬಾಂಬ್ ಸ್ಫೋಟದ ಬಳಿಕ ದೇಶಾದ್ಯಂತ ಎಲ್ಲೆಲ್ಲೂ ಟಾಸ್ಕ್ ಫೋರ್ಸ್ ಪರಿಶೀಲನೆ ನಡೆಸುತ್ತಿದ್ದು, ಬುಧವಾರ ಬೈಕ್ ವೊಂದರಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬೈಕ್ ಅನ್ನೇ ಸ್ಫೋಟಿಸಲಾಗಿತ್ತು. ಭಾನುವಾರ ನಡೆದ ಉಗ್ರರದಾಳಿಯಲ್ಲಿ 359 ಜನ ಮೃತರಾಗಿದ್ದು, 500 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಈ ಭೀಕರ ಕೃತ್ಯದ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತಿದೆ.
Sri Lanka; Another blast heard in Pugoda town