ಬೆಂಗಳೂರು, ಏ.25- ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇದೇ 30ರಿಂದ ಮೇ 2ರ ಒಳಗೆ ಪ್ರಕಟಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಮಂಗಳವಾರವಷ್ಟೇ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ದತ್ತಾಂಶ ಕ್ರೋಢಿಕರಣ, ಅಂಕಗಳ ತಾಳೆ ದೃಢಿಕರಣ ಹಾಗೂ ಇನ್ನಿತರ ಲೋಪದೋಷಗಳ ತಿದ್ದು ಪಡಿ ಕಾರ್ಯ ಮಾತ್ರ ಬಾಕಿ ಉಳಿದಿದೆ.
ಈ ವಾರದೊಳಗಾಗಿ ಈ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳಿಸಿ ಏ. 30ರಿಂದ ಮೇ 2ರ ಒಳಗೆ ಫಲಿತಾಂಶ ಪ್ರಕಟಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳನ್ನು ಡಿಜಿಟಲಿಕರಣಗೊಳಿಸುವ ಹಿನ್ನೆಲೆಯಲ್ಲಿ ಈ ಬಾರಿ ಶೀಘ್ರವಾಗಿ ಫಲಿತಾಂಶ ಪ್ರಕಟಿಸಬಹುದಾಗಿದೆ.ಅದಕ್ಕೂ ಮುನ್ನ ಆನ್ಲೈನ್ ನಲ್ಲಿ ಅಂಕಗಳನ್ನು ನಮೂದಿಸುವ ಕಾರ್ಯ ತ್ವರಿತವಾಗಿ ನಡೆಯುತ್ತಿದೆ.
ಪರೀಕ್ಷಾ ಫಲಿತಾಂಶ ಪ್ರಕಟವಾಗುತ್ತಿದಂತೆ ಕರ್ನಾಟಕ ಶಿಕ್ಷಣ ಮಂಡಲಿ ಅಧಿಕೃತ ವೆಬ್ಸೈಟ್ www.krresults.nic.inಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಅಂಕಪಟ್ಟಿಯನ್ನು ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.