ಬೆಂಗಳೂರು,ಏ.25-ಹುದ್ದೆಯ ನಿರೀಕ್ಷೆಯಲ್ಲಿದ್ದ ಮೂರು ಮಂದಿ ಐಎಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಹುದ್ದೆ ನೀಡಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಗಂಗಾರಾಮ್ ಬಡೇರಿಯ ಅವರನ್ನು ನೇಮಕ ಮಾಡಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ನೇಮಕ ಮಾಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಾಗಿ ಅಕ್ರಮ್ ಪಾಷ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.