ನವದೆಹಲಿ: ಏರ್ ಇಂಡಿಯಾ ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡು ಬರುತ್ತಿರುವ ಕಾರಣದಿಂದಾಗಿ ಇಂದು ದೇಶಾದ್ಯಂತ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಬೆಳಿಗ್ಗೆ 3.30 ರಿಂದಲೇ ಪ್ರಪಂಚದಾದ್ಯಂತ ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ. ಇದೇ ಕಾರಣದಿಂದಲೇ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸುವ ಮುನ್ನವೇ ವಿಮಾನ ಹಾರಾಟ ತಾತ್ಕಲಿಕವಾಗಿ ಸ್ಥಗಿತಗೊಳಿಸಿದ್ದೇವೆ ಎಂದು ಇಂದಿರಗಾಂಧಿ ಅಂತಾರಾಷ್ಟ್ರೀಯ ವಿಮಾನ ಸಿಬ್ಬಂದಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಿಂದ ದೇಶದ ಪ್ರಮುಖ ನಗರಗಳಿಗೆ ಹೊರಡಬೇಕಾಗಿದ್ದ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ವಿಮಾನಗಳಲ್ಲಿ ತಾಂತ್ರಿಕ ದೋಷ ಕಂಡು ಬರುತ್ತಿದೆ. ಅದನ್ನು ಸರಿಪಡಿಸಲು ಯತ್ನಿಸುತ್ತಿದ್ದೇವೆ. ಹಾಗಾಗಿ ವಿಮಾನಗಳ ಹಾರಾಟ ರದ್ದುಗೊಳಿಸಿರುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನಗಳ ಹಾರಾಟ ಹಠಾತ್ ರದ್ದುಗೊಂಡ ಪರಿಣಾಮವಾಗಿ ಪ್ರಯಾಣಿಕರು ತೀವ್ರ ತೊಂದರೆಯಲ್ಲಿ ಸಿಲುಕಿದ್ದಾರೆ. ವಿಮಾನ ಹಾರಾಟ ಶೀಘ್ರವೇ ಪುನಾರಂಭಗೊಳ್ಳಲಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದರೂ, ಪ್ರಯಾಣಿಕರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಟ್ವೀಟ್ ಮೂಲಕ ಮನವಿ ಮಾಡುತ್ತಿದ್ಧಾರೆ.