
ಮೈಸೂರು, ಏ.27-ಶ್ರೀಲಂಕಾದಲ್ಲಿ ಸಂಭವಿಸಿದ ಆತ್ಮಾಹುತಿ ದಾಳಿ ಹಿನ್ನೆಲೆಯಲ್ಲಿ ನಗರದ ಹೊಟೇಲ್ ಮಾಲೀಕರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಕೈಗೊಳ್ಳಬೇಕೆಂದು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ ಮನವಿ ಮಾಡಿದ್ದಾರೆ.
ಪ್ರವಾಸಿಗರ ನೆಪದಲ್ಲಿ ಹೊಟೇಲ್ಗಳ ರೂಂಗಳನ್ನು ಮುಂಗಡವಾಗಿ ಕಾಯ್ದಿರಿಸಿ ತದನಂತರ ಭಯೋತ್ಪಾದಕರು ಮೈಸೂರಿಗೆ ಬಂದು ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಟೇಲ್ಗೆ ಬರುವ ಪ್ರತಿಯೊಬ್ಬರನ್ನು ಮೆಟಲ್ ಡಿಟೆಕ್ಟಿವ್ ಮೂಲಕ ತಪಾಸಣೆ ನಡೆಸಿ ಅವರ ಪೂರ್ಣ ಮಾಹಿತಿ ಪಡೆದು ಕೊಠಡಿ ನೀಡಬೇಕೆಂದು ಸೂಚಿಸಿದ್ದಾರೆ.
ಅಲ್ಲದೆ, ಯಾವುದೇ ವ್ಯಕ್ತಿಯ ಬಗ್ಗೆ ಅನುಮಾನ ಬಂದಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಅವರಿಗೆ ಮಾಹಿತಿ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.