
ಬೆಂಗಳೂರು, ಏ.27- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಏ.29 ಮತ್ತು 30ರಂದು ನಗರದ 84 ಕೇಂದ್ರಗಳಲ್ಲಿ ನಡೆಸಲಿದ್ದು , ಪರೀಕ್ಷಾ ಕೇಂದ್ರಗಳ ಸುತ್ತಲೂ ನಗರ ಪೊಲೀಸ್ ಆಯುಕ್ತರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ರಿಯವರೆಗೂ ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೂ ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತರಾದ ಸುನಿಲ್ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.