
ಮೈಸೂರು,ಏ.27-ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು, ಫಲಿತಾಂಶ ಮೇ 23ರಂದು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ ಎಣಿಕೆ ಕಾರ್ಯಕಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಮತ ಎಣಿಎಗಾಗಿ ನಗರದ ಪಡುವಾರಹಳ್ಳಿ ಬಳಿ ಇರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಮೇ 23ರಂದು ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಇದೇ ಕಟ್ಟಡದ ನೆಲ 1 ಮತ್ತು 2ನೇ ಮಹಡಿಗಳ ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯದ ಒಂದು ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ಗಳಂತೆ 8 ವಿಧಾನ ಕ್ಷೇತ್ರಗಳಿಗೆ 112 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ.
ಒಂದು ಟೇಬಲ್ಗೆ ಇಬ್ಬರು ಅಧಿಕಾರಿಗಳು ಹಾಗೂ ಓರ್ವ ಸಹಾಯಕರಂತೆ ಒಟ್ಟು 336 ಮಂದಿಯನ್ನು ಮತ ಎಣಿಕೆ ಕಾರ್ಯಕ್ಕಾಗಿ ನೇಮಿಸಿಕೊಳ್ಳಲಾಗಿದೆ.
ಈಗಾಗಲೇ ಮತ ಎಣಿಕೆ ಕಾರ್ಯಕ್ಕಾಗಿ ಸಿಬ್ಬಂದಿಗೆ ತರಬೇತಿ ಮೇ 2ನೇ ವಾರದಲ್ಲಿ ನಡೆಯಲಿದೆ.