ನವದೆಹಲಿ: ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯ 7 ಮಾಜಿ ಸೇನಾಧಿಕಾರಿಗಳು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಮ್ಮುಖದಲ್ಲಿ ಲೆ. ಜ. ಜೆಬಿಎಸ್ ಯಾದವ್, ಲೆ.ಜ. ಆರ್.ಎನ್. ಸಿಂಗ್, ಲೆ.ಜ. ಎಸ್.ಕೆ. ಪಟ್ಯಾಲ್, ಲೆ.ಜ. ಸುನಿತ್ ಕುಮಾರ್, ಲೆ.ಜ. ನಿತಿನ್ ಕೊಹ್ಲಿ, ಕರ್ನಲ್ ಆರ್.ಕೆ. ತ್ರಿಪಾಠಿ, ವಿಂಗ್ ಕಮಾಂಡರ್ ನವನೀತ್ ಮಗಾನ್ ಬಿಜೆಪಿಗೆ ಸೇರ್ಪಡೆಯಾದರು.
ಕಳೆದ ಲೋಕಸಭೆ ಚುನಾವಣೆ ವೇಳೆಯೂ ಜನರಲ್ ವಿ.ಕೆ. ಸಿಂಗ್ ಮತ್ತು ಕರ್ನಲ್ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಬಿಜೆಪಿಗೆ ಸೇರ್ಪಡೆಯಾಗಿ ಸಕ್ರಿಯ ರಾಜಕೀಯಕ್ಕೆ ಬಂದಿದ್ದರು. ಸಿಂಗ್ ಮತ್ತು ರಾಥೋಡ್ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ 7 ಮಾಜಿ ಸೇನಾಧಿಕಾರಿಗಳು ಬಿಜೆಪಿ ಸೇರಿರುವುದು ವಿಶೇಷವಾಗಿದೆ.
Seven Army veterans join BJP