ನವದೆಹಲಿ: ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂಬ ಆಮ್ ಆದ್ಮಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಗಂಭೀರ್,ಕಳೆದ ನಾಲ್ಕೂವರೆ ವರ್ಷಗಳಲ್ಲಿ ಆಪ್ ಸರ್ಕಾರ ದೆಹಲಿಯಲ್ಲಿ ಯಾವುದೇ ಕೆಲಸವನ್ನು ಮಾಡಿಲ್ಲ. ಹಾಗಾಗಿ ಆಪ್ ಅಭ್ಯರ್ಥಿ ನನ್ನ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸುತ್ತದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗಂಭೀರ್, ಮತ ಕೇಳಲು ಯಾವುದೇ ವಿಷಯಗಳು ಇಲ್ಲದಿದ್ದಾಗ ಈ ರೀತಿಯ ಆರೋಪಗಳನ್ನು ಮಾಡುತ್ತಾರೆ. ನಕಾರಾತ್ಮಕ ತಂತ್ರಗಳನ್ನು ಬಳಸುವ ಮೂಲಕ ಚುನಾವಣೆಯನ್ನು ಗೆಲ್ಲಲು ಎದುರಾಳಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಖಡಕ್ ಉತ್ತರ ನೀಡಿದ್ದಾರೆ.
ಗೌತಮ್ ಗಂಭೀರ್ ರಾಜೇಂದ್ರ ನಗರ ಮತ್ತು ಕರೋಲ್ ಭಾಗ್ ಈ ಎರಡು ಕಡೆಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂದು ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಆಪ್ ಅಭ್ಯರ್ಥಿಯಾಗಿರುವ ಅತಿಶಿ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
gautam gambhir reaction on aap allegations