![pushpalatha](http://kannada.vartamitra.com/wp-content/uploads/2019/04/pushpalatha-573x381.jpg)
ಮೈಸೂರು,ಏ.28- ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿಲ್ಲ. ಹಾಗಿದ್ದು ನೀರಿನ ಕೊರತೆ ಕಂಡು ಬರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸಲಾಗುವುದು ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ತಿಳಿಸಿದರು.
ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಗರ ಪಾಲಿಕೆಯಲ್ಲಿ 20 ನೀರಿನ ಟ್ಯಾಂಕರ್ಗಳಿವೆ. ಹೆಚ್ಚುವರಿಯಾಗಿ ಇನ್ನು 5 ಟ್ಯಾಂಕರ್ಗಳ ವ್ಯವಸ್ಥೆ ಮಾಡಲಾಗುವುದು ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಚಾಮುಂಡಿ ಬೆಟ್ಟ ಮತ್ತು ಹಿನಕಲ್ ನಗರ ಪಾಲಿಕೆ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಚಾಮುಂಡಿ ಬೆಟ್ಟಕ್ಕೆ ಮನವಿ ಮೇರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುವುದು ಎಂದು ತಿಳಿಸಿದರು.
ನಗರ ಪ್ರದೇಶಗಳಲ್ಲಿ ನೀರಿನ ಕೊರತೆ ಕಂಡುಬರುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸುವುದಾಗಿ ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ಅಷ್ಟಾಗಿ ನೀರಿನ ಕೊರತೆ ಇಲ್ಲ . ಬೋರ್ವೆಲ್ನಿಂದ ನೀರು ಪಡೆದು ಸರಬರಾಜು ಮಾಡುವ ಪ್ರದೇಶಗಳಿಗೆ ಕೊಂಚ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು ಎಂದರು.