ಲಕ್ನೋ: ಅಮೇಥಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ದೂರಿದ್ದಾರೆ.
ಸ್ಮೃತಿ ಇರಾನಿಯವರು ತಮ್ಮ ಕ್ಷೇತ್ರದಲ್ಲಿ ಮಾಧ್ಯಮಗಳ ಮುಂದೆಯೇ ಮತದಾರರಿಗೆ ಆಮಿಷ ಒಡ್ಡುತ್ತಿದ್ದಾರೆ, ಇದು ತಪ್ಪು. ಅಮೇಥಿಯ ಜನರು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ. ರಾಯ್ಬರೇಲಿ ಹಾಗೂ ಅಮೇಥಿಗೆ ನಾನು ಸಾಕಷ್ಟು ಬಾರಿ ಬಂದಿದ್ದೇನೆ. ಇಲ್ಲಿನ ಜನರ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ತಿಳಿಸಿದರು.
ಬಿಜೆಪಿ ನಾಯಕರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಜನರನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ. ಇಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಸಮಸ್ಯೆಗಳು ಸ್ಪಷ್ಟವಾಗಿ ಕಾಣುತ್ತವೆ. ಈ ಬಗ್ಗೆ ಕಾಳಜಿವಹಿಸಿ ಪರಿಹಾರ ಕಂಡುಕೊಳ್ಳುವುದು ಸರ್ಕಾರ ಜವಾಬ್ದಾರಿ. ಆದರೆ ಬಿಜೆಪಿ ನಾಯಕರು ಜನರ ಸಮಸ್ಯೆಗಳನ್ನ ಆಲಿಸುತ್ತಿಲ್ಲ ಎಂದು ದೂರಿದರು.
Priyanka Gandhi’s big allegation: ‘Smriti Irani distributing shoes and sarees among people in Amethi’