ಮೈಸೂರು, ಏ.28-ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ರೈಲ್ವೆ ನಿಲ್ದಾಣದ ಬಳಿ ಇಂದು ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷಾಂತರ ಮಾಡುವವರು ಪ್ರಾಣಿಗಿಂತಲೂ ಕಡೆ. ಅಂತಹವರನ್ನು 10 ವರ್ಷ ಪಕ್ಷದಿಂದ ವಜಾ ಮಾಡಬೇಕು, 2 ವರ್ಷಗಳ ಜೈಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಎಲ್ಲಾ ಪಕ್ಷದವರು 4 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಚುನಾವಣಾ ಆಯೋಗ ಯಾವುದೇ ಪಕ್ಷದ ವಿರುದ್ಧವೂ ಕ್ರಮಕೈಗೊಂಡಿಲ್ಲ ಎಂದರು.
ಈ ಚುನಾವಣೆಯನ್ನು ರದ್ದುಗೊಳಿಸಿ ಮರು ಚುನಾವಣೆ ನಡೆಸಬೇಕೆಂದು ಆಗ್ರಹಿಸಿದರು.