ಉಪಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ-ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್

ಕಲಬುರಗಿ,ಏ.29- ನನ್ನ ತಂದೆ ಉಮೇಶ್ ಜಾಧವ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿದೆ. ಉಪಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಹೇಳಿದರು.

ಚಿಂಚೋಳಿ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ತಂದೆಯ ರಾಜಕೀಯ ಅನುಭವ ನನ್ನ ಜೊತೆಗಿದೆ. ಅವರು ಮಾಡಿದ ಅಭಿವೃದ್ಧಿ ಕೆಲಸಗಳು ನನ್ನ ಕೈಹಿಡಿಯಲಿದೆ. ನನ್ನ ತಂದೆಯ ಅವಧಿಯಲ್ಲಿ ನೆನೆಗುದಿಗೆ ಬಿದ್ದ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ