ಬೆಂಗಳೂರು, ಏ.29- ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪದೇ ಪದೇ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಇಂದು ನಾಗೇಂದ್ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಂತೆ ತಕ್ಷಣವೇ ತಮ್ಮ ವಶಕ್ಕೆ ತೆಗೆದುಕೊಳ್ಳುವಂತೆ ಪೊಲೀಸರು ನ್ಯಾಯಾಧೀಶರಿಗೆ ಆದೇಶ ನೀಡಿದರು.
ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ಕಳೆದ ಬಾರಿ ವಿಚಾರಣೆಗೆ ಗೈರುಹಾಜರಾಗಿದ್ದರು.
ಇದರಿಂದ ನ್ಯಾಯಾಲಯ ನಾಗೇಂದ್ರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು. ಇಂದು ವಾರೆಂಟ್‍ನ ರೀಕಾಲ್ ಮಾಡಿಸಿಕೊಳ್ಳಲು ಆಗಮಿಸಿದ ವೇಳೆ ವಶಕ್ಕೆ ಪಡೆಯುವಂತೆ ನ್ಯಾಯಾಧೀಶರು ಸೂಚಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ಕೂಡ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.