ತುಮಕೂರು, ಏ.29-ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ.
ಕೃಷ್ಣೇಗೌಡ(50) ಮೃತಪಟ್ಟ ರೈತ.
ಭತ್ತದ ಗದ್ದೆಗೆ ನೀರು ಹಾಯಿಸಲು ಹೋದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಕೃಷ್ಣೇಗೌಡ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಆಕ್ರೋಶ: ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಎರಡು ಮೂರು ಬಾರಿ ವಿದ್ಯುತ್ ಲೈನ್ನ್ನು ದುರಸ್ತಿಗೊಳ್ಳಲಿಲ್ಲ. ಅದರ ಫಲವಾಗಿ ಇಂದು ಕೃಷ್ಣೇಗೌಡ ಮೃತಪಟ್ಟಿದ್ದಾನೆ. ಇದಕ್ಕೆ ಯಾರು ಹೊಣೆ ಎಂದು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.
ಸ್ಥಳಕ್ಕೆ ಶಾಸಕ ಬಿ.ಸಿ.ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.
ನೊಣವಿನಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.