ಮಾಜಿ ಶಾಸಕ ವಿಜಯಕುಮಾರ್ ಖಂಡ್ರೆ ನಿಧನ

ಬೆಂಗಳೂರು, ಏ.29-ಬಾಲ್ಕಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಜಯ್‍ಕುಮಾರ್ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜನಾನುರಾಗಿ ಶಾಸಕರೆಂದೇ ಜನಪ್ರಿಯರಾಗಿದ್ದ ಖಂಡ್ರೆ ಅವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮೃತರ ಕುಟುಂಬವರ್ಗದವರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ