ಬೆಂಗಳೂರು, ಏ.29-ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಒತ್ತಾಯ ಮಾಡಿದರು.
ಇಂದು ಗಾಂಧಿ ಭವನದಲ್ಲಿ ಗಾಂಧಿ ಜಯಂತಿ ಆಚರಣೆ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೆಪ್ಟೆಂಬರ್ ಒಳಗೆ ಆಚರಿಸಬೇಕು ಹಾಗೂ ಮೂರು ದಿನಗಳವರೆಗೂ ಜಯಂತಿಯ ಆಚರಣೆ ನಡೆಯಲಿದ್ದು, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.
ಈ ಮೂರು ದಿನದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳಬೇಕು. ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗಾಂಧಿ ಸಾಂಸ್ಕøತಿಕ ಕೇಂದ್ರಗಳನ್ನು ನಿರ್ಮಿಸಬೇಕು. ಅಲ್ಲದೆ, ಗಾಂಧಿ ಸ್ಮಾರಕ ನಿರ್ಮಾಣಕ್ಕೆ ಅನುದಾನ ನೀಡುವವರೆಲ್ಲ ಮೂರು ದಿನ ನಡೆಯುವ ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಯುವ ಜನತೆಗೆ ಗಾಂಧೀಜಿಯ ವಿಚಾರಧಾರೆಗಳನ್ನು ತಿಳಿಸುವ ಮೂಲಕ ಅವರನ್ನು ಪ್ರಜ್ಞಾವಂತರನ್ನಾಗಿ ಮಾಡಬೇಕು ಎಂದು ಹೇಳಿದರು.