ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.
9 ರಾಜ್ಯಗಳ ಒಟ್ಟು 72 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ನಾಲ್ಕನೇ ಹಂತದಲ್ಲಿ ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಮಧ್ಯ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಒಡಿಶಾ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ ಹಲವು ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.
ಮಧ್ಯಾಹ್ನ 12 ಗಂಟೆ ವೇಳೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶೇ.3.74 ರಷ್ಟು, ಜಾರ್ಖಂಡ್ ನಲ್ಲಿ ಶೇ. 29.01 ರಷ್ಟು, ಮಧ್ಯ ಪ್ರದೇಶದಲ್ಲಿ ಶೇ.17.04ರಷ್ಟು, ಮಹಾರಾಷ್ಟ್ರದಲ್ಲಿ ಶೇ. 17.04ರಷ್ಟು, ಬಿಹಾರದಲ್ಲಿ ಶೇ.18.26ರಷ್ಟು, ಒಡಿಶಾದಲ್ಲಿ ಶೇ. 19.67ರಷ್ಟು, ರಾಜಸ್ಥಾನದಲ್ಲಿ ಶೇ. 29.29ರಷ್ಟು, ಉತ್ತರ ಪ್ರದೇಶದಲ್ಲಿ ಶೇ.21.18ರಷ್ಟು ಮತ್ತು ಪಶ್ಚಿಮ ಬಂಗಾಳದಲ್ಲಿ ಶೇ. 35.10ರಷ್ಟು ಮತದಾನವಾಗಿದೆ ಎಂದು
lok sabha election-2019,4th phase voting