ಐಟಿ ದಾಳಿ ಪ್ರಕರಣ-ನ್ಯಾಯಾಲಯದ ಮುಂದೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಏ.29- ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾತಿ ವಿನಾಯಿತಿ ನಿರಾಕರಣೆ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಐಟಿ ಸಲ್ಲಿಸಿರುವ ದೂರಿನಲ್ಲಿ ಹವಾಲಾ ಆರೋಪ ಮಾಡಿದ್ದು, ಆರೋಪಮುಕ್ತಗೊಳಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಅರ್ಜಿ ಸಲ್ಲಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ ಹಾಜರಾತಿ ವಿನಾಯಿತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ವಿಚಾರಣೆಗೆ ತಪ್ಪದೆ ಹಾಜರಾಗುತ್ತಿದ್ದಾರೆ. ಇಂದು ನಡೆದ ವಿಚಾರಣೆಗೂ ಕೂಡ ಹಾಜರಾಗಿದ್ದರು.

ಹಲವು ಪ್ರಕರಣಗಳಲ್ಲಿ ವಿವಿಧ ಜನಪ್ರತಿನಿಧಿಗಳು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರನ್ನು ವಶಕ್ಕೆ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ