ತೃಣಮೂಲ ಕಾಂಗ್ರೆಸ್ ನ 40 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದ ಪ್ರಧಾನಿ ಮೋದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ ಶಾಕ್ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಸೆರಾಂಪುರ್ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ, ಮೇ 23ರ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಸ್ತಿತ್ವಕ್ಕೆ ಬರಲಿದೆ. ಆ ಬಳಿಕ ಎಲ್ಲೆಲ್ಲೂ ಬಿಜೆಪಿ ಇರಲಿದೆ. ಟಿಎಂಸಿ ಪಕ್ಷದ ನಿಮ್ಮ ಶಾಸಕರು ಕೂಡ ನಿಮ್ಮನ್ನು ತೊರೆದು ಬರಲಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ ಈಗಾಗಲೇ 40 ಮಂದಿ ಟಿಎಂಸಿ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ. ಏಕೆಂದರೆ ನಿಮ್ಮ ಮೇಲೆ ಇಟ್ಟಿದ್ದ ನಂಬಿಕೆಯನ್ನು ಅವರು ಕಳೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ನಿಮಗೆ ಈ ಸಂಗತಿ ಕಷ್ಟವಾಗಬಹುದು ಎಂದು ಹೇಳಿದ್ದಾರೆ.

ಕಳೆದ ಸೋಮವಾರವೂ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿದ್ದ ಮೋದಿ ಅವರು, ಲೋಕಸಭಾ ಚುನಾವಣೆ 4ನೇ ಹಂತದ ಮತದಾನದ ವೇಳೆ ಉಂಟಾದ ಘರ್ಷಣೆಗಳ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಟಿಎಂಸಿ ಕಾರ್ಯಕರ್ತರನ್ನು ಗೂಂಡಾಗಳ ಗುಂಪು ಎಂದು ಕರೆದಿದ್ದರು. ಅಲ್ಲದೇ ಗೂಂಡಾಗಳು ಚುನಾವಣೆಯಲ್ಲಿ ಮತದಾನವನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

Didi, 40 Of Your Lawmakers In Touch With Me: PM Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ