ರಮೇಶ್ ಜಾರಕಿಹೊಳಿ ವಿದೇಶಕ್ಕೆ ಹೋಗುವದರಲ್ಲಿ ತಪ್ಪೇನಿಲ್ಲ-ಮಾಜಿ ಸಿ.ಎಂ.ಸಿದ್ದರಾಮಯ್ಯ

ಹುಬ್ಬಳ್ಳಿ,ಏ.29- ಶಾಸಕ ರಮೇಶ್ ಜಾರಕಿಹೊಳಿಯವರು ವಿದೇಶಕ್ಕೆ ಹೋಗುವುದು ತಪ್ಪೇನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿಯವರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದರ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಅವರು ವಿದೇಶಿ ಪ್ರವಾಸ ಕೈಗೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ರಮೇಶ್ ಅವರ ಬಂಡಾಯ ಶಮನವಾಗಿಲ್ಲ. ಅವರ ಮನವೊಲಿಕೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಶಾಸಕ ಸೋಮಶೇಖರ್ ಅವರು ಸೌಹಾರ್ಧಯುತವಾಗಿ ಸಭೆ ಕರೆದಿದ್ದಾರೆ ಅಷ್ಟೆ. ಕುಂದಗೋಳ ಉಪಚುನಾವಣೆಯಲ್ಲಿ ಯಾವುದೇ ಬಂಡಾಯವಿಲ್ಲ. ಮೈತ್ರಿ ಸರ್ಕಾರದಲ್ಲಿಯೂ ಕೂಡ ಯಾವುದೇ ಭಿನ್ನಮತವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಕುಮಾರಸ್ವಾಮಿ ಮಾಧ್ಯಮದವರ ಮೇಲೆ ಹರಿಹಾಯುತ್ತಾರೆ ಎನ್ನುವದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯಿಸಲಿಲ್ಲ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ