ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಯಾವುದೇ ಕ್ರಮವಿಲ್ಲ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಆಯೋಗದ ವಿರುದ್ಧ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೆರಿದೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಜರುಗಿಸುವುದಿಲ್ಲ, ಮೋದಿ ಬಗ್ಗೆ ಆಯೋಗ ನಿಷ್ಕ್ರಿಯವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಚುನಾವಣಾ ಪ್ರಚಾರದ ಸಮಯದಲ್ಲಿ ಇಬ್ಬರೂ ನಾಯಕರು ಮಿಲಿಟರಿ ಕಾರ್ಯಾಚರಣೆಯನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದ್ದಾರೆ ಎಂದಿರುವ ಕಾಂಗ್ರೆಸ್ ವಿವಿಧ ದೂರುಗಳ ಹೊರತಾಗಿಯೂ ಆಯೋಗವು ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ದೂರಿನ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದ್ದು, ನಾಳೆ ವಿಚಾರಣೆ ನಡೆಸಲಿದೆ.

SC agrees to hear plea of Congress MP alleging violation of Model Code by Modi & Amit Shah

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ