ಬೆಂಗಳೂರು, ಏ.30- ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ವೇಗವಾಗಿ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿ ಹೋಗುತ್ತಿದ್ದ ಸೆಕ್ಯೂರಿಟಿಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿರುವಘಟನೆ ನಡೆದಿದೆ.
ಚಿಕ್ಕಬಳ್ಳಾಪುರದ ಎಸ್ಜೆಸಿ ಐಟಿ ಕಾಲೇಜಿನ ಸೆಕ್ಯೂರಿಟಿಗಾರ್ಡ್ಯುವರಾಜ (27)ಎಂದು ಮೃತಪಟ್ಟವರಾಗಿದ್ದಾರೆ.
ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಹೋಗುತ್ತಿದ್ದಯುವರಾಜನಿಗೆಎದುರಿಗೆ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೆÇಲೀಸರು ಪ್ರಕರಣ ದಾಖಲಿಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆಕೈಗೊಂಡಿದ್ದಾರೆ.