ರಾಜ್ಯದಲ್ಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ-ಹರ್ಷ ವ್ಯಕ್ತಪಡಿಸಿದ ಸಚಿವ ಎಚ್.ಡಿ.ರೇವಣ್ಣ

ಹಾಸನ, ಏ.30-ರಾಜ್ಯದಲ್ಲೇ ಹಾಸನ ಜಿಲ್ಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಿದೆ.ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವೈದ್ಯಕೀಯ, ಎಂಜಿನಿಯರಿಂಗ್, ಕೃಷಿ, ಪಶುವೈದ್ಯಕೀಯ ಕಾಲೇಜು ಸೇರಿದಂತೆ ಎಲ್ಲಾ ಕಾಲೇಜುಗಳನ್ನು ಹಾಸನದಲ್ಲೇ ಸ್ಥಾಪಿಸಿರುವುದು ಸಾರ್ಥಕವಾಯಿತು ಎಂದಿದ್ದಾರೆ.

ಹಗಲಿರುಳು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ ಕಾಳಜಿ ವಹಿಸಿ ಪೆÇ್ರೀ ಪೋಷಕರಿಗೆ , ಶ್ರಮವಹಿಸಿದ ಜಿಲ್ಲೆ ಎಲ್ಲ ಶಾಲಾ ಶಿಕ್ಷಕ ವೃಂದದವರಿಗೆ ಅಭಿನಂದನೆ ಸಲ್ಲಿಸುವುದಾಗಿ ರೇವಣ್ಣ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ