ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೋಟೀಸ್

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬ್ರಿಟೀಷ್ ಪೌರತ್ವ ಕುರಿತು ಕೇಂದ್ರ ಗೃಹ ಸಚಿವಾಲಯ ನೋಟೀಸ್ ಜಾರಿ ಮಾಡಿದೆ.

ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವ ಕುರಿತು ಹಿರಿಯ ಬಿಜೆಪಿ ನಾಯಕ ಡಾ. ಸುಬ್ರಹ್ಮಣ್ಯಂ ಸ್ವಾಮಿ ಅವರ ದೂರಿನ ಮೇರೆಗೆ ಗೃಹ ಸಚಿವಾಲಯ ನೋಟಿಸ್ ಜಾರಿ ಮಾಡಿದ್ದು 15 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಿದೆ.

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ರಾಹುಲ್ ಗಾಂಧಿ ತಮ್ಮ ಪೌರತ್ವ ವಿವಾದವನ್ನು ಮುಚ್ಚಿಟ್ಟಿದ್ದು, ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿ ಸುಬ್ರಹ್ಯಣ್ಯಂ ಸ್ವಾಮಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದುಕೊಂಡಿದ್ದು, ಭಾರತದಲ್ಲಿ ದ್ವಿಪೌರತ್ವಕ್ಕೆ ಅವಕಾಶವಿಲ್ಲ. ಹೀಗಾಗಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಬೇಕು ಎಂದು ಸುಬ್ರಹ್ಮಣ್ಯಂ ಸ್ವಾಮಿ ಆಗ್ರಹಿಸಿದ್ದರು.

ರಾಹುಲ್ ಗಾಂಧಿ ನಾಮಪತ್ರಗಳಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಪಕ್ಷೇತರ ಅಭ್ಯರ್ಥಿ ಧ್ರುವ ಲಾಲ್ ಎಂಬವರು ನೀಡಿದ್ದ ದೂರಿನ ಮೇರೆಗೆ ಈ ತಿಂಗಳ ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ನಾಮಪತ್ರ ಪರಿಶೀಲನೆಯನ್ನು ಮುಂದೂಡಿದ್ದರು.

ಇದಕ್ಕೂ ಮೊದಲು ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್, ಬ್ರಿಟಿಷ್ ಕಂಪನಿಯೊಂದಕ್ಕೆ ಸಂಬಂಧಿಸಿದ ದಾಖಲೆಗಳಲ್ಲಿ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದು ಉಲ್ಲೇಖವಾಗಿರುವುದು ಅಚ್ಚರಿ ತಂದಿದೆ. ಈ ಬಗ್ಗೆ ಯಾರೂ ಆಕ್ಷೇಪ ಸಲ್ಲಿಸದಿರುವುದು ಅಚ್ಚರಿ ತಂದಿದೆ ಎಂದು ಹೇಳಿದ್ದರು.

Home ministry issues notice to Rahul Gandhi over citizenship status row

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ