ತುಮಕೂರು, ಏ.30-ಚಿಂದಿ ಆಯುವವರ ನಡುವೆ ಕುಡಿದ ಮತ್ತಿನಲ್ಲಿ ಜಗಳವಾಗಿ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ.
ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇರುವ ಮಹಾನಗರ ಪಾಲಿಕೆ ಅಂಗಡಿಗಳ ಮುಂಭಾಗ ಚಿಂದಿ ಆಯುವವರ ನಡುವೆ ಮಧ್ಯರಾತ್ರಿ 12.30ರ ಸುಮಾರಿನಲ್ಲಿ ಯಾವುದೋ ವಿಚಾರವಾಗಿ ಜಗಳ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಒಬ್ಬನ ಮೇಲೆ ಹಲ್ಲೆ ನಡೆಸಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ಶಿರಾ ನಗರದ ಮೇಗಳ ಪೇಟೆ ನಿವಾಸಿ ಸಲೀಂ (47) ಎಂದು ಗುರುತಿಸಲಾಗಿದೆ.
ಇಂದು ಮುಂಜಾನೆ ಸುದ್ದಿ ತಿಳಿದ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಕುಡಿದ ಮತ್ತಿನಲ್ಲಿ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ.
ನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ , ಡಿವೈಎಸ್ಪಿ ತಿಪ್ಪೇಸ್ವಾಮಿ, ಇನ್ಸ್ಪೆಕ್ಟರ್ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಕೊಲೆಯಾಗಿರುವ ವ್ಯಕ್ತಿಯನ್ನು ಗಮನಿಸಿದರೆ ಚಿಂದಿ ಆಯುವವನು ಎಂಬುದು ಗೊತ್ತಾಗಿದೆ. ಯಾವ ವಿಚಾರಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದಷ್ಟೆ ತಿಳಿಯಬೇಕಿದೆ.ಕೊಲೆ ನಡೆದ ಜಾಗದಲ್ಲಿರುವ ಸಿಸಿ ಟಿವಿ ಫುಟೇಜ್ನ್ನು ಪಡೆದುಕೊಂಡು ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ಆರೋಪಿ ಪತ್ತೆಗಾಗಿ ಡಿವೈಎಸ್ಪಿ ತಿಪ್ಪೇಸ್ವಾಮಿ ಹಾಗೂ ಇನ್ಸ್ಪೆಕ್ಟರ್ ಚಂದ್ರಶೇಖರ್ ನೇತೃತ್ವದ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು.