ರಾಹುಲ್ ಗಾಂಧಿಗೆ ಗೃಹ ಇಲಾಖೆ ನೋಟೀಸ್: ಪ್ರೀಯಾಂಕಾ ಗಾಂಧಿ ಕಿಡಿ

ನವದೆಹಲಿ: ಪೌರತ್ವದ ವಿವಾದ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ. ಇದೇನಿದು ಅನ್ಯಾಯ. ರಾಹುಲ್​ ಗಾಂಧಿ ಭಾರತದಲ್ಲಿ ಜನಿಸಿದವರು ಎಂಬುದು ಇಡೀ ದೇಶಕ್ಕೆ ತಿಳಿದಿರುವ ಸತ್ಯ. ಅವರು ಇಲ್ಲೇ ಹುಟ್ಟಿ ಬೆಳದದ್ದನ್ನು ಜನರು ಕಣ್ಣಾರೆ ಕಂಡಿದ್ದಾರೆ ಎಂದು ಹೇಳಿದ್ದಾರೆ.

ಅಮೇಥಿಯಲ್ಲಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ, ಇಡೀ ದೇಶಕ್ಕೆ ರಾಹುಲ್ ಗಾಂಧಿ ಹಿಂದೂಸ್ತಾನಿ ಎಂಬುವುದು ಗೊತ್ತಿದೆ. ರಾಹುಲ್ ಭಾರತದಲ್ಲಿ ಹುಟ್ಟಿ ಬೆಳೆದಿದ್ದಾರೆ ಎಂಬುವುದು ತಿಳಿದಿದೆ. ಇಂತಹ ನಡೆ ಎಲ್ಲವೂ ‘ಬಕ್ವಾಸ್’ ಎಂದು ದೂರಿದರು.

ರಾಹುಲ್ ಪೌರತ್ವ ವಿವಾದ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ನೀಡಿರುವ ದೂರನ್ನು ಸ್ವೀಕರಿಸಿ ಕೇಂದ್ರ ಗೃಹ ಇಲಾಖೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್‍ಗೆ 15 ದಿನಗಳ ಒಳಗಾಗಿ ಪ್ರತಿಕ್ರಿಯೆ ನೀಡಬೇಕು ಎಂದು ಸೂಚಿಸಿದೆ.

ರಾಹುಲ್ ಗಾಂಧಿ ಅವರು ಇಂಗ್ಲೆಂಡ್ ವಿಶ್ವವಿದ್ಯಾಲಯದ ಶೈಕ್ಷಣಿಕ ಪ್ರಮಾಣ ಪತ್ರ ಹಾಗೂ ಯುಕೆ ಕಂಪನಿಯ ಪ್ರಮಾಣ ಪತ್ರದಲ್ಲಿ ಬ್ರಿಟಿಷ್ ಪೌರತ್ವವನ್ನು ಪಡೆದಿದ್ದಾರೆ. ಭಾರತೀಯರಲ್ಲದವರಿಗೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶವಿಲ್ಲ. ಆದ್ದರಿಂದ ಅವರ ನಾಮಪತ್ರವನ್ನು ಪ್ರಜಾಪ್ರತಿನಿಧಿ ಕಾಯ್ದೆ ಅಡಿ ಪರಿಶೀಲನೆ ನಡೆಸಬೇಕು ಎಂದು ದೂರಿನಲ್ಲಿ ಸುಬ್ರಮಣಿಯನ್ ಸ್ವಾಮಿ ಮನವಿ ಮಾಡಿದ್ದರು.

People of India have seen Rahul Gandhi being born and growing up here: Priyanka Gandhi Vadra on citizenship row

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ