ಬೆಂಗಳೂರು, ಮೇ 1- ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಸಲ್ಲಿಸುವದರಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಇದುವರೆಗೂ ಒಟ್ಟು 235 ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ನಿಗಮ ಭಾಜನವಾಗಿದೆ.
ಆ ಮೂಲಕ ಜಾಗತಿಕ ಮಟ್ಟದಲ್ಲಿ ನಿಗಮ ಮನ್ನಣೆ ಗಳಿಸಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲವು ಪ್ರಮುಖ ಪ್ರಶಸ್ತಿಗಳನ್ನು ಪಡೆದಿರುವುದಲ್ಲದೆ ಲಿಮ್ಕಾ ದಾಖಲೆಯಲ್ಲೂ ಸೇರ್ಪಡೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ನೌಕರರ ಆರೋಗ್ಯವೆ ನಿಗಮದ ಆಸ್ತಿ ಎಂದು ಭಾವಿಸಿ ಜಯದೇವ ಹೃದ್ರೋಗ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ನಿಗಮದ ನೌಕರರು ಮತ್ತು ಅಧಿಕಾರಿಗಳಿಗೆ ಹೃದಯ ಸಂಬಂಧಿ ಹತ್ತು ತಪಾಸಣೆಗಳನ್ನು ಮಾಡಲಾತ್ತದೆ.ನಿಗಮದ ಹತ್ತು ಸಾವಿರ ನೌಕರರು ಈ ಯೋಜನೆ ಪಡೆದಿದ್ದಾರೆ.
ಇದರಿಂದ ನೂರಾರು ಕಾರ್ಮಿಕರ ಮುನ್ನಚ್ಚರಿಕೆ ವಹಿಸಲು ಹಾಗೂ ಪ್ರಾಣಪಾಯದಿಂದ ಪಾರಾಗಲು ಸಾಧ್ಯವಾಗಿದೆ ಎಂದಿದ್ದಾರೆ.