
ಬೆಂಗಳೂರು,ಮೇ1-ಇಂದು 87ನೇ ವಸಂತಕ್ಕೆ ಕಾಲಿಟ್ಟ ಕೇಂದ್ರದ ಮಾಜಿ ಸಚಿವ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಅವರಿಗೆ ಬಿಜೆಪಿ ನಾಯಕರು ಹೂಗುಚ್ಛ ನೀಡಿ ಶುಭ ಕೋರಿದರು.
ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್, ಶಾಸಕ ಅರವಿಂದ್ ಲಿಂಬಾವಳಿ, ನಗರ ಬಿಜೆಪಿ ಘಟಕದ ಅಧ್ಯಕ್ಷ ಸದಾಶಿವ, ಪಕ್ಷದ ಸಹವಕ್ತಾರ ಎ.ಎಚ್.ಆನಂದ್ ಸೇರಿದಂತೆ ಮತ್ತಿತರ ಮುಖಂಡರು ಕೃಷ್ಣ ಅವರಿಗೆ ಹೂಗುಚ್ಛ ನೀಡಿ ಹುಟ್ಟುಹಬ್ಬದ ಪ್ರಯುಕ್ತ ಶುಭಾಷಯಗಳನ್ನು ಕೋರಿದರು.
ಬೆಳಗಿನಿಂದಲೇ ಎಸ್.ಎಂ.ಕೃಷ್ಣ ಅವರ ಮನೆಗೆ ವಿವಿಧ ಪಕ್ಷಗಳ ಗಣ್ಯರು ಆಗಮಿಸಿದ್ದರು.
ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿ ಸಿಹಿ ಹಂಚಿ ಸಂಭ್ರಮಿಸಿದರು.