ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು-ಘಟನೆಯಲ್ಲಿ ಕಾರು ಚಾಲಕನ ಸಾವು

ಬೆಂಗಳೂರು, ಮೇ 1- ಏರ್ಪೋರ್ಟ್ಗೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಕಾರು ಚಾಲನೆ ಮಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಜೆ ಹಳ್ಳಿ ನಿವಾಸಿ ತೌಸಿಫ್ (29) ಮೃತಪಟ್ಟಿರುವ ಯುವಕ.ರಾತ್ರಿ ಬಾಗಲೂರು ರಸ್ತೆಯಿಂದ ಏರ್ಪೋರ್ಟ್ಗೆಗೆ ತೌಸಿಫ್ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಏರ್ಪೋರ್ಟ್ ಹಿಂಭಾಗದ ಗೇಟ್‍ನ ನವೋದಯ ಶಾಲೆ ಬಳಿ ತಡರಾತ್ರಿ 12.45ರಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ.

ಪರಿಣಾಮವಾಗಿ ತೌಸಿಫ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸುದ್ದಿ ತಿಳಿದ ಚಿಕ್ಕಜಾಲ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಯುವಕನ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ