ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆರೋಪ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.
ಮಧ್ಯಪ್ರದೇಶದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನರೇಂದ್ರ ಮೋದಿಯವರು ಬುಡಕಟ್ಟು ಜನಾಂಗದವರ ವಿರೋಧಿಯಾಗಿದ್ದಾರೆ.
ಹೊಸ ಕಾನೂನನ್ನು ಹೊರತಂದಿದ್ದು, ಅದರ ಅನ್ವಯ ಪೊಲೀಸರು ಬುಡಕಟ್ಟು ಸಮುದಾಯದ ಜನರ ಮೇಲೆ ಗುಂಡು ಹಾರಿಸಬಹುದು. ಅಲ್ಲದೆ ಜನಾಂಗದವರು ವಾಸವಾಗಿರುವ ಭೂಮಿ, ಅರಣ್ಯ, ಬಳಸುವ ನೀರು ಎಲ್ಲವನ್ನೂ ವಶಪಡಿಸಿಕೊಳ್ಳಬಹುದು ಎಂದು ಹೇಳಿದ್ದರು.
ರಾಹುಲ್ ಗಾಂಧಿಯವರ ಈ ಹೇಳಿಕೆಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. ಪಕ್ಷದ ದೂರನ್ನು ಪರಿಗಣಿಸಿದ ಚುನಾವಣಾ ಆಯೋಗ, ಇನ್ನು 48 ಗಂಟೆಗಳಲ್ಲಿ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಿದೆ.
EC issues notice to Rahul Gandhi for violating model code