ಕಂಟೇನರ್ ಲಾರಿಗಳ ಮುಖಾಮುಖಿ ಡಿಕ್ಕಿ-ಘಟನೆಯಲ್ಲಿ ಚಾಲಕರಿಬ್ಬರ ಸಜೀವ ದಹನ

ವಿಜಯಪುರ,ಮೇ 4-ಕಂಟೇನರ್ ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರಿಬ್ಬರು ಸಜೀವ ದಹನವಾಗಿರುವ ಧಾರುಣ ಘಟನೆ ವಿಜಯಪುರದ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ಎನ್‍ಎಚ್ 13 ರಲ್ಲಿ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಹೊರ್ತಿ ಠಾಣಾ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಅಪಘಾತದ ಪರಿಣಾಮ ಎನ್‍ಎಚ್ ಸಂಚಾರ ಸಪೂರ್ಣ ಬಂದ್ ಆಗಿದೆ.

ಈ ಘಟನೆಯಲ್ಲಿ ಕಂಟೇನರ್‍ನಲ್ಲಿದ್ದ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಹೊರ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ