ಡಿವೈಡರ್‍ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು-ಘಟನೆಯಲ್ಲಿ ದಂಪತಿಗಳ ಸಾವು

ದಾವಣಗೆರೆ, ಮೇ 4-ಡಿವೈಡರ್‍ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಬೆಂಗಳೂರಿನ ಶಿವಪ್ರಕಾಶ್ (43), ಉಮಾ (40) ಮೃತಪಟ್ಟ ದಂಪತಿ.

ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ಮುಂಜಾನೆ 5 ಗಂಟೆಯಲ್ಲಿ ಈ ನತದೃಷ್ಟ ದಂಪತಿ ಉಕ್ಕಡಗಾತ್ರಿಗೆ ಕಾರಿನಲ್ಲಿ ತೆರಳುತ್ತಿದ್ದರು.

ನಗರದ ಹೊಸ ಕುಂದವಾಡ ಬಳಿ ಎನ್‍ಎಚ್-4ರಲ್ಲಿ ಕಾರು ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ