![death](http://kannada.vartamitra.com/wp-content/uploads/2018/03/death-573x381.jpg)
ತುಮಕೂರು, ಮೇ 4- ಟಿಪ್ಪರ್ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿ ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅರಸೀಕೆರೆ ತಾಲ್ಲೂಕಿನ ಸಲಪರಹಳ್ಳಿ ಗ್ರಾಮದ ಪರಮೇಶ (36) ಮೃತಪಟ್ಟ ಬೈಕ್ ಸವಾರ. ಮಂಜುಳಾ (35), ಸೌಂದರ್ಯ (3), ಚೇತನ್ (5) ಇವರಿಗೆ ಗಂಭೀರ ಗಾಯಗಳಾಗಿದ್ದು , ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಅರಸೀಕೆರೆಯಿಂದ ತಿಪಟೂರು ಕೆರೆಗೆ ಬರುತ್ತಿದ್ದ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದಲ್ಲಿ ಸರಪರ ಹಳ್ಳಿಯಿಂದ ಅಯ್ಯನ ಬಾವಿಗೆ ಕುಟುಂಬ ತೆರಳುತ್ತಿದ್ದಾಗ ಹಿಂದಿನಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು , ಪರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಹಿಂಬದಿ ಕುಳಿತಿದ್ದ ಮಂಜುಳಾ, ಚೇತನ್, ಸೌಂದರ್ಯಗೆ ತೀವ್ರವಾಗಿ ಗಾಯಗೊಂಡಿದ್ದು , ತಿಪಟೂರಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ಗೆ ದಾಖಲಿಸಲಾಗಿದೆ.
ತಿಪಟೂರಿನಿಂದ ಕೋನೇನಹಳ್ಳಿ ಮಾರ್ಗವಾಗಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿದ್ದು , ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಈ ಸಂಬಂಧ ಹೊನ್ನವಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.