
ಬೆಂಗಳೂರು, ಮೇ 4- ಮುಂಬರುವ ಜೂ.30ರೊಳಗೆ ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ಹಾಗೂ ದಾಯಿತ್ವದ ವಿವರವನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬೇಕಾಗಿದೆ.
2018-19ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ವಿವರವನ್ನು ಶಾಸಕರು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬೇಕಾಗಿದೆ. ಈ ಸಂಬಂಧ ಲೋಕಾಯುಕ್ತ ನಿಂಬಂಧಕರು ರಾಜ್ಯ ವಿಧಾನಸಭೆ ಕಾರ್ಯದರ್ಶಿಗೆ ಆಸ್ತಿ ವಿವರ ಸಲ್ಲಿಸಬೇಕಾಗಿರುವ ಎಲ್ಲ ಶಾಸಕರಿಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.
ಲೋಕಾಯುಕ್ತ ಕಾಯಿದೆ 1984ರ ಕಲಂ 7ರ ಉಪಕಲಂ(1)ರಲ್ಲಿ ಉಲ್ಲೇಖಿಸಿರುವಂತೆ ಸರ್ಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕ ನೌಕರರು ತಮ್ಮ ಹಾಗೂ ತಮ್ಮ ಕುಟುಂಬದ ಆಸ್ತಿ ಮತ್ತು ದಾಯಿತ್ವದ ಪಟ್ಟಿಯನ್ನು ನಿಗದಿತ ನಮೂನೆಯಲ್ಲಿ ಪ್ರತಿವರ್ಷದ ಜೂ. 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ.
ಹೀಗಾಗಿ ರಾಜ್ಯವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರು ಜೂ. 30ರೊಳಗೆ ತಮ್ಮ ಹಾಗೂ ತಮ್ಮ ಕುಟುಂಬ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸಬೇಕಾಗಿದೆ.