![S janaki](http://kannada.vartamitra.com/wp-content/uploads/2019/05/S-janaki-678x380.jpg)
ಮೈಸೂರು: ಗಾನಕೋಗಿಲೆ ಎಸ್.ಜಾನಕಿ ಅವರು ಜಾರಿಬಿದ್ದ ಪರಿಣಾಮ ಸೊಂಟದ ಮೂಲೆ ಮುರಿದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ ಜಾನಕಿ ಮೈಸೂರಿಗೆ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಆಯತಪ್ಪಿಬಿದ್ದು ಪೆಟ್ಟುಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ ಜಾನಕಿ ಅವರ ಸೊಂಟದ ಮೂಳೆ ಮುರಿದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮೂರು ದಿನಗಳ ಹಿಂದೆಯೇ ಜಾನಕಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸೊಂಟದ ಭಾಗದಲ್ಲಿ ಫ್ರಾಕ್ಚರ್ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರಿಸಿದ್ದಾರೆ.
S Janaki,admit hospital