ಚಂಡಮಾರುತ ಹಾನಿ ಕುರಿತು ಚರ್ಚಿಸಲು ಪ್ರಧಾನಿ ಕರೆ ಸ್ವೀಕರಿಸದ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಫೋನಿ ಚಂಡಮಾರುತ ಒಡಿಶಾದ ಬಳಿಕ ಪಶ್ಚಿಮ ಬಂಗಾಳದಲ್ಲೂ ಭಾರೀ ಅನಾಹುತ ಸೃಷ್ಟಿಸಿದ್ದು ಚಂಡಮಾರುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ಈ ನಡುವೆ ಚಂಡಮಾರುತದ ಹಾನಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದರೂ ಮಮತಾ ಬ್ಯಾನರ್ಜಿ ಕರೆಯನ್ನು ಸ್ವೀಕರಿಸಿಲ್ಲ ಅಲ್ಲದೆ ಮರು ಕರೆಯನ್ನೂ ಮಾಡಿಲ್ಲ ಎನ್ನಲಾಗುತ್ತಿದೆ.

ನಂತರ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು ಎಂದು ಉನ್ನತ ಸರ್ಕಾರಿ ಅಧಿಕಾರಿ ಹೇಳಿಕೆ ನೀಡಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿಯನ್ನು ಸಂಪರ್ಕಿಸಲು ಪ್ರಧಾನಿ ಮೋದಿ ಅವರ ಸಿಬ್ಬಂದಿ ಎರಡು ಬಾರಿ ಪ್ರಯತ್ನಿಸಿದರು. ಎರಡೂ ಬಾರಿ ಮರು ಕರೆ ಮಾಡಲಾಗುವುದು ಎಂದು ಹೇಳಿದರು. ಮತ್ತೊಂದು ಸಲ ಕರೆ ಮಾಡಿದಾಗ ಮುಖ್ಯಮಂತ್ರಿಗಳು ಪ್ರವಾಸದಲ್ಲಿದ್ದಾರೆ ಎಂದು ತಿಳಿಸಿದರು ಎಂದು ಅಧಿಕಾರಿ ಹೇಳಿದರು.

ತೃಣಮೂಲ ಕಾಂಗ್ರೆಸ್ ಚಂಡಮಾರುತದಿಂದ ಉಂಟಾದ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಈ ಹೇಳಿಕೆ ಹೊರಬಿದ್ದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ