ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ-ಘಟನೆಯಲ್ಲಿ ಅಪಾರ ಪ್ರಮಾಣದ ಹಾನಿ

Fire Fierce Hot Flames Burning Orange Heat

ಬೆಂಗಳೂರು, ಮೇ 5-ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಸರುಘಟ್ಟ ಮುಖ್ಯರಸ್ತೆಯ ಎಂ.ಎಸ್.ಪಾಳ್ಯದಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ಮಧ್ಯರಾತ್ರಿ ಒಂದು ಗಂಟೆ ಸುಮಾರಿನಲ್ಲಿ ಎಂ.ಎಸ್.ಪಾಳ್ಯದಲ್ಲಿರುವ ಇಂಟೀರಿಯಲ್ ಡೆಕೋರೇಟರ್ ಅಂಗಡಿ ಹಾಗೂ ಇದರ ಪಕ್ಕದಲ್ಲಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.

ಸುದ್ದಿ ತಿಳಿದ ವಿದ್ಯಾರಣ್ಯಪುರ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಯ ತೀವ್ರತೆಗೆ ಎರಡೂ ಅಂಗಡಿಗಳಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ.

ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಈ ಬಗ್ಗೆ ವಿದ್ಯಾರಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ