ಎರಡೂ ಸ್ಥಾನಗಳನ್ನು ನಿಭಾಯಿಸುವುದು ಕಷ್ಟ-ಮಾಜಿ ಸಿ.ಎಂ.ಯಡಿಯೂರಪ್ಪ

ಹುಬ್ಬಳ್ಳಿ,ಮೇ 5- ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಜವಾಬ್ದಾರಿ ನಿಭಾಯಿಸುವುದು ಕಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಸ್ಥಾನಗಳನ್ನು ನಿಭಾಯಿಸುವುದು ಕಷ್ಟ ಎಂದು ಹೇಳುವ ಮೂಲಕ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಿಸುವ ಸಾಧ್ಯತೆಯ ಸುಳಿವನ್ನು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಷಯ ಕೇಳಿ ಬಂದಿತ್ತು. ಆ ಸ್ಥಾನದ ಮೇಲೆ ಈಗಾಗಲೇ ಹಲವರು ಕಣ್ಣಿಟ್ಟು ಲಾಭಿ ಶುರುವಿಟ್ಟುಕೊಂಡಿದ್ದಾರೆ.

ಸಿ.ಟಿ.ರವಿ, ಅರವಿಂದ ಲಿಂಬಾವಳಿ, ಸುರೇಶ್ ಕುಮಾರ್, ಉಮೇಶ್ ಕತ್ತಿ ಮುಂತಾದವರ ಹೆಸರು ಕೇಳಿಬಂದಿತ್ತು. ಲೋಕಸಭೆ ಚುನಾವಣೆಯ ನಂತರ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಯಡಿಯೂರಪ್ಪನವರ ಈ ಹೇಳಿಕೆ ಮತ್ತಷ್ಟು ಪುಷ್ಠಿ ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ