ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ

ಬೆಂಗಳೂರು, ಮೇ 5- ರಾಜ್ಯದ ಮಿನಿ ಮಹಾಸಮರವೆಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಆಯ್ಕೆಯನ್ನು ಜಿಲ್ಲಾಧ್ಯಕ್ಷರಿಗೆ ವಹಿಸಲಾಗಿದೆ.

ಆಯಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಹೊಣೆಯನ್ನು ಸ್ಥಳೀಯ ನಾಯಕರು ಹಾಗೂ ಜಿಲ್ಲಾ, ತಾಲೂಕು ಮಟ್ಟದ ಅಧ್ಯಕ್ಷರುಗಳಿಗೆ ನೀಡಲಾಗಿದೆ ಎಂದು ಜೆಡಿಎಸ್ ಪಕ್ಷದ ಮೂಲಗಳು ತಿಳಿಸಿವೆ.

ಈಗಾಗಲೇ ಜಿಲ್ಲಾಮಟ್ಟದ ಪದಾಧಿಕಾರಿಗಳಿಗೆ ಈ ಸಂಬಂಧ ನಿರ್ದೇಶನ ನೀಡಲಾಗಿದ್ದು, ಪಕ್ಷದ ಕೇಂದ್ರ ಕಚೇರಿಯಿಂದ ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳಿಗೆ ನೀಡಬೇಕಾಗಿರುವ ಬಿ ಫಾರಂಗಳನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ