ಚಂಡಮಾರುತದ ಪರಿಣಾಮದಿಂದ ತೇವಾಂಶದಲ್ಲಿ ಉಂಟಾದ ಕೊರತೆ

ಬೆಂಗಳೂರು, ಮೇ 5- ಪೋನಿ ಚಂಡಮಾರುತದ ನೇರ ಪ್ರಭಾವ ರಾಜ್ಯದ ಮೇಲಾಗದಿದ್ದರೂ ತೇವಾಂಶವನ್ನು ಸೆಳೆದುಕೊಂಡಿರುವುದರಿಂದ ಗರಿಷ್ಠ ತಾಪಮಾನದಲ್ಲಿ ಗಣನೀಯ ಏರಿಕೆ ಕಂಡುಬರಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದಲ್ಲಿ ತೇವಾಂಶದ ಕೊರತೆ ಉಂಟಾಗಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದರು.

ಸದ್ಯಕ್ಕೆ ರಾಜ್ಯದಲ್ಲಿ ಒಣ ಹವೆ ಮುಂದುವರಿಯುತ್ತಿದ್ದು, ಗರಿಷ್ಠ ತಾಪಮಾನ ಹೆಚ್ಚಾಗುತ್ತಿದೆ. ಈ ವಾರದಲ್ಲಿ ಒಣಹವೆ, ಬಿಸಿ ಗಾಳಿ ಹಾಗೂ ತಾಪಮಾನ ಹೆಚ್ಚಾಗಿ ಕಂಡುಬರಲಿದೆ. ಆದರೂ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ