15.5 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು 7,417 ಕೋಟಿ ರೂ. ಬಿಡುಗಡೆ

ಬೆಂಗಳೂರು,ಮೇ6- ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‍ಗಳು ಹಾಗೂ ವಾಣಿಜ್ಯ ಬ್ಯಾಂಕ್‍ಗಳನ್ನು ಒಳಗೊಂಡಂತೆ 15.5 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು 7,417 ಕೋಟಿ ರೂ. ಬಿಡುಗಡೆ ಮಾಡಿದೆ.

ಪ್ರತಿ ತಿಂಗಳು ರೈತರು ಪಾವತಿಸಬೇಕಿರುವ ಸಾಲದ ಬಾಕಿಯನ್ನು ಬ್ಯಾಂಕ್‍ಗಳಿಗೆ ಪಾವತಿಸಲು ಅನುಕೂಲವಾಗುವಂತೆ ರೈತರ ಖಾತೆಗಳಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡುತ್ತಿದೆ.

ವಾಣಿಜ್ಯ ಬ್ಯಾಂಕ್‍ಗಳ 7.49 ಲಕ್ಷ ರೈತರ 3,929 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, 1.5 ಲಕ್ಷ ರೈತರ 900 ಕೋಟಿ ರೂ. ಬಿಡುಗಡೆ ಮಾಡಲು ಸಿದ್ದವಾಗಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಅಂದರೆ ಮೇ 23ರ ನಂತರ ಬಿಡುಗಡೆ ಮಾಡಲು ಸರ್ಕಾರ ಉದ್ದೇಶಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅದೇ ರೀತಿ ಸರ್ಕಾರಿ ವಲಯದ 8.1 ಲಕ್ಷ ರೈತರ 3,488 ಕೋಟಿ ರೂ.ಗಳನ್ನು ಏಪ್ರಿಲ್‍ವರೆಗೆ ಬಿಡುಗಡೆ ಮಾಡಲಾಗಿದ್ದು, ಉಳಿದ ರೈತರ ಸಾಲದ ಹಣವನ್ನು ಪ್ರತಿ ತಿಂಗಳು ಬಿಡುಗಡೆ ಮಾಡಿ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ