ಚುನಾವಣಾಧಿಕಾರಿಗಳಿಂದ ನಗದು ವಶ

ಹುಬ್ಬಳ್ಳಿ, ಮೇ 7- ಕುಂದಗೋಳ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಅಗಡಿ ಗ್ರಾಮದ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ನಲ್ಲಿ ನಿನ್ನೆ ಸಂಜೆ 42 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. 12 ಲಕ್ಷ ರೂಪಾಯಿಗಳಿಗೆ ಎಕ್ಸಿಸ್ ಬ್ಯಾಂಕಿನ ದಾಖಲೆಗಳನ್ನು ಒದಗಿಸಿದ್ದಾರೆ. ಉಳಿದ 30 ಲಕ್ಷ ರೂ.ಗಳಿಗೂ ಇಂದು ದಾಖಲೆಗಳನ್ನು ಒದಗಿಸುವುದಾಗಿ ತಿಳಿಸಿರುವುದರಿಂದ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಇರಿಸಲಾಗಿದೆ. ದಾಖಲೆಗಳನ್ನು ಒದಗಿಸಿದ ನಂತರ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯ ಹಣ ಬಿಡುಗಡೆ ಸಮಿತಿ ಈ ಕುರಿತು ಪರಿಶೀಲಿಸಿ,ನಿರ್ಣಯ ಕೈಗೊಳ್ಳಲಿದೆ ಎಂದು ಚುನಾವಣಾಧಿಕಾರಿ ವಿ.ಪ್ರಸನ್ನ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ