ಸಿ.ಎಂ. ಕುಮಾರಸ್ವಾಮಿಯರಿಂದ ತಿರುಚಂಡೂರಿನ ಸುಬ್ಮಣ್ಯಸ್ವಾಮಿ ದೇವಾಲಯದಲ್ಲಿ ಪೂಜೆ

ಬೆಂಗಳೂರು, ಮೇ 7-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದು, ಇಂದು ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ತಮಿಳುನಾಡಿಗೆ ಮುಖ್ಯಮಂತ್ರಿ ತೆರಳಿದರು.

ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆಯನ್ನು ಇಂದು ಸಲ್ಲಿಸಿದ್ದಾರೆ. ದೇವಾಲಯಲ್ಲಿ ಪೂಜೆ ಸಲ್ಲಿಸಿದ ನಂತರ ಇಂದು ಸಂಜೆ ನಗರಕ್ಕೆ ಮುಖ್ಯಮಂತ್ರಿಗಳು ವಾಪಸ್ಸಾಗಲಿದ್ದಾರೆ.

ಮುಖ್ಯಮಂತ್ರಿಯಾದ ನಂತರ ಕುಮಾರಸ್ವಾಮಿಯವರು ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕುಕ್ಕೆ ಸುಬ್ರಹ್ಮಣ್ಯಸ್ವಾಮಿ, ಶೃಂಗೇರಿ ಶಾರದಾಂಬೆ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಲೋಕಸಭೆ ಚುನಾವಣೆಗೆ ಮತದಾನ ನಡೆದ ನಂತರ ಉಡುಪಿ ಬಳಿ ಖಾಸಗಿ ರೆಸಾರ್ಟ್‍ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆದ ನಂತರ ಮುಖ್ಯಮಂತ್ರಿಗಳು ಕೊಪ್ಪ ತಾಲೂಕಿನ ಕಮ್ಮರಡಿ ಬಳಿಯ ಉಮಾಮಹೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ