ನಿಂತಿದ್ದ ಟ್ರ್ಯಾಕಟರ್‍ಗೆ ಬೈಕ್ ಡಿಕ್ಕಿ-ಘಟನೆಯಲ್ಲಿ ಹೆಡ್ ಕಾನ್ಸ್ಟೇಬಲ್ ಸಾವು

ಕುಣಿಗಲ್, ಮೇ 7- ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರೀನಿವಾಸ್ ಟಿ.ಆರ್. (45) ಮೃತ ಹೆಡ್ ಕಾನ್ಸ್ಟೇಬಲ್.

ಇವರು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಾರ್ಯನಿಮಿತ್ತ ಕುಣಿಗಲ್ ಪಟ್ಟಣಕ್ಕೆ ಬೈಕ್‍ನಲ್ಲಿ ಬಂದಿದ್ದರು.

ಕಾರ್ಯ ಮುಗಿಸಿ ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವಾಗ ರಾಜ್ಯ ಹೆದ್ದಾರಿ-33ರ ಕುರುಡಿಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್‍ಗೆ ಬೈಕ್ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ