ಕೆ.ಎಸ್.ಈಶ್ವರಪ್ಪನವರು ರಾಜಕಾರಣಕ್ಕೆ ಯೋಗ್ಯರಲ್ಲ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಕಲಬುರಗಿ, ಮೇ 7- ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಮೈತ್ರಿ ಅಭ್ಯರ್ಥಿ ಸುಭಾಷ್ ರಾಠೋಡ್ ಪರ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಅವರು ಮಾಧ್ಯಮದೊಂದಿಗೆ ಮಾತನಾಡಿದರು.

ಈಶ್ವರಪ್ಪನವರ ಮನಸ್ಸಿನಲ್ಲಿ ಒಳ್ಳೆಯ ವಿಚಾರ ಇದೆಯೋ ಇಲ್ಲವೋ ಗೊತ್ತಿಲ್ಲ. ಮಹಿಳೆಯರ ಬಗ್ಗೆ ಅವಹೇಳನಕಾರಿ ಯಾಗಿ ಮಾತನಾಡುತ್ತಾರೆ.ಇಷ್ಟಿದ್ದರೂ ಬಿಜೆಪಿಯವರು ಅವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದರು.

ರಾಜಕಾರಣಕ್ಕೆ ಇವರು ಯೋಗ್ಯರಲ್ಲ ಎಂದು ಗುಡುಗಿದ ದಿನೇಶ್ ಗುಂಡೂರಾವ್ ಅವರು, ಬಿಜೆಪಿಗೆ ನೈತಿಕತೆ ಇದ್ದರೆ ಅವರ ಬಾಯಿ ಮುಚ್ಚಿಸಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ